ಬೆಂಗಳೂರು: ಮನೆ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಾಡಿಗೆದಾರ ಮಹಿಳೆ ಮೇಲೆ ಮನೆ ಮಾಲೀಕರು ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಲಗ್ಗೆರೆಯಲ್ಲಿ ರಾತ್ರಿ ಘಟನೆ ನಡೆದಿದೆ. ಬಾಡಿಗೆದಾರರಾದ ಪೂರ್ಣಿಮಾ ಅವರ ಮೇಲೆ ಮನೆ ಮಾಲೀಕರಾದ ಮಹಾಲಕ್ಷ್ಮಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಕುಳಿತಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ರಾಜಗೋಪಾಲ ನಗರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮನೆ ಮಾಲಿಕೆಯನ್ನು ವಶಕ್ಕೆ ಪಡೆದಿದ್ದು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದಾರೆ. ಇವತ್ತು ಬೆಳಗ್ಗೆ 10 ಗಂಟೆ ನಂತರ ವಿಚಾರಣೆ ನಡೆಸಿ ಬಳಿಕ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.