ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಮೇಲೆ ಕನ್ನಡ ಧ್ವಜಾರೋಹಣ ನೆರವೇರಿಸಬೇಕು ಎಂದು ಆಗ್ರಹಿಸಿ ಕರವೇ ಹಾಗೂ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.