ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುನಿರತ್ನ ಪರವಾಗಿ ದರ್ಶನ್ ಶುಕ್ರವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಕ್ಷೇತ್ರದ ತುಂಬಾ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸಿದ್ದರು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೆ ಅವರು ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ.
ಪ್ರಚಾರದ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.