ಬೆಂಗಳೂರು: ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಎಲ್ಲಿಯೂ ಓಡಿಹೋಗಿಲ್ಲ, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಪೊಲೀಸರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ ಎಂಬುದು ಸುಳ್ಳು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದರು.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಕೆಲದಿನಗಳ ಹಿಂದೆ ಯಾರಿಗೂ ಗೊತ್ತಾಗದಂತೆಯೇ ಡಿಸ್ಚಾರ್ಜ್ ಮಾಡಿಸಿಕೊಂಡು ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದೀಗ ಡಿ.ಕೆ. ಶಿವಕುಮಾರ್ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.