ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ದೇಶದ ಜನತೆಗೆ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ. ಮತ್ತೊಂದು ಉತ್ತಮ ಪ್ಯಾಕೇಜ್ ಘೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.
ಹಣಕಾಸು ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಈ ಬಗ್ಗೆ ಮಾಹಿತಿ ನೀಡಿ, ಕೈಗಾರಿಕೆ ವಲಯ, ವ್ಯಾಪಾರ ಸಂಘಟನೆ, ಅನೇಕ ಸಚಿವಾಲಯಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಈ ಸಲಹೆಯನ್ನು ಆಧರಿಸಿ ಪ್ಯಾಕೇಜ್ ನೀಡುವ ಬಗ್ಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಲಹೆಗಳನ್ನು ಪಡೆದ ನಂತರ ಪರಿಶೀಲನೆ ನಡೆಸಲಾಗುವುದು. ಆರ್ಥಿಕತೆ ಆದ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ಪ್ಯಾಕೇಜ್ ನೀಡಲಾಗುವುದು. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದ್ದು ಸುಸ್ಥಿರ ಬೆಳವಣಿಗೆಯತ್ತ ಸಾಗುತ್ತಿದೆ. ಈ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.