ತಿರುವನಂತಪುರ: ಗೌರವ ಇದ್ದರೆ ರೇಪ್ ಆದ ನಂತರ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮಲ್ಲಪಲ್ಲಿ ರಾಮಚಂದ್ರನ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಆತ್ಮಗೌರವ ಇರುವ ಮಹಿಳೆಯರು ಅತ್ಯಾಚಾರಕ್ಕೆ ಒಳಗಾದಲ್ಲಿ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಇಲ್ಲವೇ ತಮ್ಮ ಮೇಲೆ ಮತ್ತೊಮ್ಮೆ ಅಂತಹ ದೌರ್ಜನ್ಯ ನಡೆಯದಂತೆ ಎಚ್ಚರಿಕೆ ವಹಿಸುತ್ತಾರೆ. ಹೀಗಿರುವಾಗ, ಒಬ್ಬ ಮಹಿಳೆ ತನ್ನ ಮೇಲೆ ನಿರಂತರ ಅತ್ಯಾಚಾರವಾಗಿದೆ ಎಂದು ಹೇಳಿದರೆ ನಂಬಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.
ಹೀಗೆ ಆರೋಪ ಮಾಡುವ ಮೂಲಕ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಆರೋಪದ ಬಗ್ಗೆ ರಾಮಚಂದ್ರನ್ ಕಿಡಿಕಾರಿದ್ದಾರೆ. ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷರ ವಿವಾದಿತ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಇದೊಂದು ನಾಚಿಕೆಗೇಡಿನ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು ತಮ್ಮ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ ರಾಮಚಂದ್ರನ್ ಕ್ಷಮೆಯಾಚಿಸಿದ್ದಾರೆ.