ಗಿಲ್ಗಿಟ್ ಮತ್ತು ಬಲ್ಟಿಸ್ತಾನವನ್ನು ಪಾಕಿಸ್ತಾನ ಆಕ್ರಮಿಸಿದೆ. ಆ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಗಿಲ್ಗಿಟ್, ಬಲ್ಟಿಸ್ತಾನವನ್ನು ರಾಜ್ಯ ಮಾಡಲು ಪಾಕ್ ಹೊರಟಿದೆ. ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಪಿಒಕೆಯ ಗಿಲ್ಗಿಟ್, ಬಲೂಚಿಸ್ತಾನ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶಗಳಿಗೆ ರಾಜ್ಯದ ಸ್ಥಾನಮಾನ ನೀಡಲು ಪಾಕಿಸ್ತಾನ ಮುಂದಾಗಿದೆ. ಇದಕ್ಕೆ ತೀವ್ರ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಈ ನಡುವೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಇದಕ್ಕೆ ಪ್ರತ್ಯುತ್ತರ ನೀಡಿರುವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಹೇಳಿದ್ದಾರೆ