ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದಾರೆ. ಅರ್ನಾಬ್ ಅವರ ನಿವಾಸಕ್ಕೆ ಆಗಮಿಸಿದ ಪೊಲೀಸರ ತಂಡ ಬಲವಂತವಾಗಿ ಅವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದೆ.
ಪೊಲೀಸರು ನ್ಯಾಯಾಲಯದಿಂದ ಯಾವುದೇ ಸಮನ್ಸ್ ಪಡೆದುಕೊಂಡಿಲ್ಲ. ಟಿ.ಆರ್.ಪಿ. ಪ್ರಕರಣದ ತನಿಖೆ, ವಿಚಾರಣೆ ಉದ್ದೇಶದಿಂದ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಇದೇ ಟಿ.ಆರ್.ಪಿ. ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು ಮರಾಠಿ ವಾಹಿನಿಗಳ ಇಬ್ಬರು ಸಂಪಾದಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬುಧವಾರ ಬೆಳಗ್ಗೆ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ಮಾಡಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಪರಾಧಿ ಎನ್ನುವಂತೆ ಅವರನ್ನು ಎಳೆದುಕೊಂಡು ಹೋಗಲಾಗಿದೆ. ಪೊಲೀಸರು ತಮ್ಮ ಮೇಲೆ ಹಲ್ಲೆ ಮಾಡಿರುವುದಾಗಿ ಅರ್ನಾಬ್ ಗೋಸ್ವಾಮಿ ಆರೋಪಿಸಿದ್ದಾರೆ.
ಟಿ.ಆರ್.ಪಿ. ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆದಿಲ್ಲ. ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.