ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಸಜ್ಜುವಾರಪಲ್ಲಿ ಗ್ರಾಮದ ಬಳಿ ನೀರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.
ಸಾಲಮಾಕಪಲ್ಲಿ ಗ್ರಾಮದ ವರುಣ್, ಬದರಿನಾಥ್, ಸಂತೋಷ್, ಮಹೇಶ್ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ. 11 -12 ವರ್ಷದ ಈ ಬಾಲಕರು ಹಸುಗಳನ್ನು ಮೇಯಿಸಲು ಹೋಗಿದ್ದಾರೆ. ಸಮೀಪದ ಹೊಂಡದಲ್ಲಿ ಈಜಲು ನೀರಿಗೆ ಇಳಿದಿದ್ದು ಈಜಲು ಬಾರದ ಮಕ್ಕಳು ನೀರಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರು ತೀವ್ರ ಹುಡುಕಾಟದ ನಂತರ ನಾಲ್ವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.