alex Certify BIG BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ, ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ, ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿದೆ. ವಿಮಾನದ ಮುಂದಿನ ವ್ಹೀಲ್ ಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ.

ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಕರಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಇರುವ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...