ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಸ್ಥಳೀಯ ಶಾಲೆಯಲ್ಲಿ ರಾತ್ರಿ ಕಳೆದಿದ್ದಾರೆ. ಅರ್ನಬ್ ರಾತ್ರಿ ಕಳೆದ ಶಾಲೆ ಅಲಿಬಾಗ್ ಜೈಲಿನ ಕೋವಿಡ್ ಕೇಂದ್ರ ಅಂತಾ ತಿಳಿದು ಬಂದಿದೆ.
ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಅಲಿಬಾಗ್ ಕೋರ್ಟ್, ಗೋಸ್ವಾಮಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನ 2018ರ ಆತ್ಮಹತ್ಯೆ ಪ್ರಕರಣ ಸಂಬಂಧ ನ.18ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿದೆ. ಪೊಲೀಸರು ಅರ್ನಬ್ರನ್ನ 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಕೋರ್ಟ್ ಬಳಿ ಮನವಿ ಮಾಡಿದ್ದರು. ಆದರೆ ಕೋರ್ಟ್ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿತ್ತು.
ಬುಧವಾರ ರಾತ್ರಿ ಆರೋಪಿ ಗೋಸ್ವಾಮಿಯನ್ನ ಕರಾವಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗಿದೆ ಅಂತಾ ಖಾಸಗಿ ಮಾಧ್ಯಮ ವರದಿ ಮಾಡಿದೆ. ಇಲ್ಲಿಂದ ನೇರವಾಗಿ ಅವರನ್ನ ಅಲಿಬಾಗ್ ಶಾಲೆಗೆ ಕರೆದೊಯ್ಯಲಾಗಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಇದೇ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಫಿರೋಜ್ ಮಹಮ್ಮದ್ ಶೇಖ್ ಹಾಗೂ ನಿತೇಶ್ ಸರ್ದಾರನ್ನ ಬುಧವಾರ ಅಲಿಬಾಗ್ ಕೋರ್ಟ್ಗೆ ಪೊಲೀಸರು ಹಾಜರುಪಡಿಸಿದ್ದರು. ಇವರಿಬ್ಬರನ್ನ ಕೋರ್ಟ್ ನ.18ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿದೆ.