ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಸಾರ್ವಜನಿಕರಿಗೆ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶವಿಲ್ಲ. ನೇರ ಪ್ರಸಾರ ಮೂಲಕ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕೊರೋನಾ ಕಾರಣದಿಂದಾಗಿ ಹಾಸನ ಜಿಲ್ಲಾಡಳಿತ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ. ವರ್ಷಕ್ಕೊಮ್ಮೆ ಹಾಸನಾಂಬ ದೇಗುಲ ತೆರೆಯುತ್ತದೆ. ಈ ಸಲ ಕೊರೊನಾ ಕಾರಣದಿಂದ ಸಾರ್ವಜನಿಕರಿಗೆ ಅವಕಾಶ ನೀಡದೆ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ ದೇಗುಲದ ಬಾಗಿಲು ತೆರೆದು ಸಂಪ್ರದಾಯದಂತೆ ಪೂಜೆ ಆರಂಭಿಸಲಾಗಿದೆ. ಭಕ್ತರಿಗೆ ಎಲ್.ಇ.ಡಿ. ಪರದೆಗಳ ಮೂಲಕ ಮತ್ತು ಆನ್ಲೈನ್ ಮೂಲಕ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. HASANAMBA LIVE 2020 ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.