ಚೆನ್ನೈ: ಪಟಾಕಿ ನಿಷೇಧಿಸದಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ರಾಜಸ್ಥಾನ ಹಾಗೂ ಒಡಿಶಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ತಮಿಳುನಾಡಿನಲ್ಲಿ 8 ಲಕ್ಷ ಕಾರ್ಮಿಕರು ಪಟಾಕಿ ಕಾರ್ಖಾನೆಗಳ ಮೇಲೆ ಅವಲಂಬಿತರಾಗಿದ್ದಾರೆ. ಪಟಾಕಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯ ಜನ ತೊಡಗಿಕೊಂಡಿದ್ದಾರೆ. ಪಟಾಕಿ ಕಾರ್ಖಾನೆಗಳ ಮೇಲೆ ಸುಮಾರು 8 ಲಕ್ಷಕ್ಕೂ ಅಧಿಕ ಮಂದಿ ಅವಲಂಬಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈಗಾಗಿ ಪಟಾಕಿ ಬಳಕೆಯ ಮೇಲೆ ನಿಷೇಧ ಮಾಡಬಾರದು. ಪಟಾಕಿ ನಿಷೇಧ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.