ಶಿವಮೊಗ್ಗ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಕಾರ್ಮಿಕರ ಮಕ್ಕಳಿಗೆ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಮಿಕರಿಗೆ ಮತ್ತು ಕಾರ್ಮಿಕರ ಮಕ್ಕಳಿಗೆ ವಿಕಿಟ್ಗಳನ್ನು ಕ್ಷೇತ್ರವಾರು ವೃತ್ತಿಗನುಗುಣವಾಗಿ ಸಾಮಗ್ರಿಗಳು, ಸುರಕ್ಷತಾ ಕಿಟ್ಗಳು ಮತ್ತು ಉಪಯುಕ್ತತಾ ಕಿಟ್ಗಳನ್ನು ನೀಡಲು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪೌಷ್ಠಿಕಾಂಶದ ಕಿಟ್ ಹಾಗೂ ಶಾಲಾ ಕಿಟ್ ಅಲ್ಲದೇ 9 ಮತ್ತು 10ನೇ ತರಗತಿ, ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ., ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಗಳನ್ನು ಒದಗಿಸಲು ಉದ್ದೇಶಿಸಿದೆ.
ಕಟ್ಟಡ ಕಾರ್ಮಿಕರು ಅರ್ಜಿ ಸಲ್ಲಿಸಲು ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಫಲಾನುಭವಿಯ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್, ಮಕ್ಕಳ ವ್ಯಾಸಂಗ ದೃಢೀಕರಣ ಪತ್ರ ಮತ್ತು ಅಂಕಪಟ್ಟಿ ಮತ್ತಿತರ ದಾಖಲೆಗಳನ್ನು ನವೆಂಬರ್ 11 ರೊಳಗಾಗಿ ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರು, ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳುವಂತೆ ಹಾಗೂ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248940 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.