ಬೆಂಗಳೂರು: ಕೊರೊನಾ ಬೆನ್ನಲ್ಲೇ ರಾಜ್ಯ ಸರ್ಕಾರ ಜನತೆಗೆ ಪಟಾಕಿ ಶಾಕ್ ನೀಡಿದ್ದು, ದೀಪಾವಳಿ ವೇಳೆ ರಾಜ್ಯದಲ್ಲಿ ಪಟಾಕಿ ಬ್ಯಾನ್ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್ ನಂತಹ ಈ ಸಂದರ್ಭದಲ್ಲಿ ಪಟಾಕಿಯಿಂದ ಆರೋಗ್ಯದ ಮೇಲೆ ಇನ್ನಷ್ಟು ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಬಾರಿ ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧ ಮಾಡಲಾಗುತ್ತಿದೆ ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡುವ ಬಗ್ಗೆ ಆರೋಗ್ಯ ಇಲಾಖೆ ತಜ್ಞರ ಜೊತೆ ಚರ್ಚೆ ನಡೆಸಿದ್ದು, ತಜ್ಞರ ಅಭಿಪ್ರಾಯದಂತೆ ಇದೀಗ ರಾಜ್ಯದಲ್ಲಿ ಪಟಾಕಿ ಮಾರಾಟ ಹಾಗೂ ಪಟಾಕಿ ಹಚ್ಚುವುದನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.