alex Certify ಕೆಎಎಸ್ ಅಧಿಕಾರಿ ಖಜಾನೆ ನೋಡಿ ದಂಗಾದ ಎಸಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಎಸ್ ಅಧಿಕಾರಿ ಖಜಾನೆ ನೋಡಿ ದಂಗಾದ ಎಸಿಬಿ

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳೇ ದಂಗಾದ ಘಟನೆ ನಡೆದಿದೆ. ಡಾ.ಬಿ. ಸುಧಾ ನಿವಾಸದಲ್ಲಿ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ಆಸ್ತಿ ಪತ್ರಗಳು ಪತ್ತೆಯಾಗಿವೆ.

ಬೆಂಗಳೂರಿನ ಕೋಡಿಹಳ್ಳಿಯಲ್ಲಿರುವ ಸುಧಾ ಅವರ ನಿವಾಸದಲ್ಲಿ ಎಸಿಬಿ ಅಧಿಕಾರಿಗಳಿಗೆ ಕೆಜಿಗಟ್ಟಲೆ ಚಿನ್ನ, 10 ಲಕ್ಷ ರೂ. ನಗದು ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿದ್ದು, ಇನ್ನೂ ಕೂಡ ಶೋಧ ಕಾರ್ಯ ಮುಂದುವರೆದಿದೆ.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಡಾ.ಸುಧಾ, ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡದಿಂದ ಸುಧಾ ಅವರ ಬೆಂಗಳೂರಿನ ಕೋಡಿಹಳ್ಳಿ ನಿವಾಸ, ಯಲಹಂಕದ ಫ್ಲಾಟ್, ಬ್ಯಾಟರಾಯನಪುರ, ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...