ನವದೆಹಲಿ: ಕಾಂಗ್ರೆಸ್ ಸೇರಲು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸಿದ್ಧತೆ ನಡೆಸಿದ್ದಾರೆ. ನಾಳೆ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ 2019 ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು. ಶಿವಮೊಗ್ಗದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದು, ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.
ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಬಳಿಕ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕೂಡ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.