alex Certify ಬೈಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: 213 ಮತಗಳಿಂದ ಸೋತಿದ್ದ ಬಸನಗೌಡ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: 213 ಮತಗಳಿಂದ ಸೋತಿದ್ದ ಬಸನಗೌಡ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಬಿಜೆಪಿ ಮುಖಂಡ ಬಸನಗೌಡ ತುರವಿಹಾಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಕ್ಷೇತ್ರದ ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರುವಿಹಾಳ ಕೇವಲ 213 ಮತಗಳ ಅಂತರದಿಂದ ಸೋಲು ಕಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...