alex Certify ಸಂಪತ್ತು, ಆಸ್ತಿ ದಾಖಲೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪತ್ತು, ಆಸ್ತಿ ದಾಖಲೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು…!

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯ ವೇಳೆ ದೊರೆತ ದಾಖಲೆಗಳಿಂದ ಎಸಿಬಿ ಅಧಿಕಾರಿಗಳಿಗೆ ಶಾಕ್ ಆಗಿದೆ.

ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಅವರ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫ್ಲಾಟ್ ಮೇಲೆ ದಾಳಿ ನಡೆಸಲಾಗಿದೆ. ರೇಣುಕಾ ಪ್ಲಾಟ್ ನಲ್ಲಿ ಮೂರುವರೆ ಕೆಜಿ ಚಿನ್ನ, 7 ಕೆಜಿ ಬೆಳ್ಳಿ, 36 ಲಕ್ಷ ರೂಪಾಯಿ ನಗದು, 250 ಕೋಟಿ ರೂಪಾಯಿ ಮೌಲ್ಯದ ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.

ರೇಣುಕಾ ಪತಿ ಚಂದ್ರಶೇಖರ್ ನಿವೃತ್ತ ಡಿವೈಎಸ್ಪಿಯಾಗಿದ್ದು, ಪುತ್ರ ಎಇಇ ಆಗಿದ್ದಾರೆ. ರೇಣುಕಾ 4 ಕಂಪನಿಗಳ ಹೆಸರಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ಕಂಪನಿಯಲ್ಲಿ ಸುಧಾ ಬೇನಾಮಿಯಾಗಿ ಹೂಡಿಕೆ ಮಾಡಿದ್ದಾರೆ ಎನ್ನುವ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...