ಮೈಸೂರು: ಕಾಂಗ್ರೆಸ್ ನಾಯಕರು ತಮ್ಮ ಸೋಲಿಗೆ ತಾವೇ ಕಾಯುತ್ತಿದ್ದಾರೆ. ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ. ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನಾಯಕರು ಪರಸ್ಪರ ತಮ್ಮ ಸೋಲನ್ನು ತಾವೇ ಕಾಯುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಣ ಡಿ.ಕೆ.ಶಿವಕುಮಾರ್ ಬಣವನ್ನು ದೂರುತ್ತದೆ. ಸಿದ್ದರಾಮಯ್ಯ ಅವರನ್ನು ತೆಗೆದುಹಾಕಬೇಕು ಎಂದು ಡಿಕೆಶಿ ಯತ್ನಿಸುತ್ತಿದ್ದಾರೆ. ಡಿಕೆಶಿಯವರನ್ನು ಕೆಳಗಿಳಿಸಬೇಕು ಎಂದು ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ. ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಬಹಿರಂಗವಾಗಿ ಕಾಣುತ್ತಿದೆ. ಇದೆಲ್ಲವನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಒಳಜಗಳದಿಂದ ಅವರು ಸೋಲನುಭವಿಸಲಿದ್ದಾರೆ. ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಹೇಳಿದರು.