ಬೆಂಗಳೂರು: ಉಪಚುನಾವಣೆಯಲ್ಲಿ ಮತದಾರರು ತೀರ್ಪು ನೀಡಿದ್ದಾರೆ. ಮತದಾರರ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಈಗಾಗಲೇ ಮತದಾರರು ತೀರ್ಪು ಕೊಟ್ಟಿದ್ದಾರೆ. ಮತ ಎಣಿಕೆ ಮುಗಿಯಲು ಇನ್ನೂ ಒಂದು ಗಂಟೆ ಬಾಕಿಯಿದೆ. ಕೊನೆ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಆದರೆ ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.