ನಮ್ಮನ್ನು ಕಾಡುವ ಅನೇಕ ಕಾಯಿಲೆಗಳಿಗೆ ಹೈಬಿಪಿ ಮುಖ್ಯ ಕಾರಣವಾಗಿದೆ. ಅಧಿಕ ರಕ್ತದೊತ್ತಡದಿಂದ ಮಧುಮೇಹ, ಪಾರ್ಶ್ವವಾಯು, ಹೃದ್ರೋಗ, ಮೂತ್ರಪಿಂಡದ ಸಮಸ್ಯೆ ಕಾಡುತ್ತದೆ. ಆದಕಾರಣ ರಕ್ತದೊತ್ತಡವನ್ನು ನಿಯಂತ್ರಿಸಲು ಈ 5 ಜ್ಯೂಸ್ ಗಳನ್ನು ಸೇವಿಸಿ.
1. ಎಳನೀರು ಸೇವಿಸುವುದರಿಂದ ದೇಹದ ಉಷ್ಣತೆ ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಹಾಗೂ ಇದರಲ್ಲಿ ಪೊಟ್ಯಾಸಿಯಂ ಅಧಿಕವಾಗಿರುವುದರಿಂದ ಇದು ದೇಹದಲ್ಲಿನ ಸೋಡಿಯಂ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಇದರಿಂದ ರಕ್ತದೊತ್ತಡ ಹತೋಟಿಗೆ ಬರುತ್ತದೆ.
2. ದಾಳಿಂಬೆ ರಸವನ್ನು ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.
3. ದಾಸವಾಳ ಹೂವಿನ ರಸದಿಂದ ಚಹಾ ತಯಾರಿಸಿ ಕುಡಿಯಿರಿ. ಇದರಲ್ಲಿರುವ ಪೋಷಕಾಂಶಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
4. ಬೀಟ್ ರೋಟ್ ನಲ್ಲಿ ಜೀವಸತ್ವ, ಖನಿಜಗಳು ಅಧಿಕವಾಗಿರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
5. ಟೊಮೆಟೊ ರಸ ಸೋಡಿಯಂ ಹಾಗೂ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುತ್ತದೆ. ಪ್ರತಿದಿನ ಒಂದು ಲೋಟ ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯದ ಆರೋಗ್ಯ ಹೆಚ್ಚುತ್ತದೆ.