
ಬೆಂಗಳೂರು: ಸೇವಾ ನಿಯಮಗಳ ತಿದ್ದುಪಡಿಗೆ ಸರ್ಕಾರಿ ನೌಕರರು ಆಕ್ಷೇಪಣೆ ಸಲ್ಲಿಸಿದ್ದಾರೆ. ನೌಕರರ ಕುಟುಂಬದವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎನ್ನುವ ನಿಯಮ ಕೈಬಿಡುವಂತೆ ಮನವಿ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಈ ಕುರಿತಾಗಿ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ. ಸರ್ಕಾರಿ ನೌಕರರ ಪತಿ ಅಥವಾ ಪತ್ನಿ ರಾಜಕೀಯ ಪಕ್ಷಗಳ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಂವಿಧಾನದ ಪ್ರಕಾರ ಮೂಲಭೂತ ಹಕ್ಕು ಆಗಿದ್ದು, ಆ ನಿಯಮ ಕೈಡಬೇಕೆಂದು ಕೋರಲಾಗಿದೆ.
ಅದೇ ರೀತಿ ಸರ್ಕಾರಿ ನೌಕರರು ಕ್ರೀಡಾ ಸಂಸ್ಥೆಗಳಲ್ಲಿ ಅಧಿಕಾರ ಹೊಂದಬಾರದು, ಸಂಘ-ಸಂಸ್ಥೆಗಳನ್ನು ಸ್ಥಾಪಿಸಬಾರದು ಎನ್ನುವ ನಿಯಮವನ್ನು ಕೈಬಿಡಲು ಮನವಿ ಮಾಡಲಾಗಿದೆ. ಮುಷ್ಕರದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು. ಆಪ್ತರಿಂದ ಪಡೆಯುವ ಉಡುಗೊರೆ ಮೌಲ್ಯ ನೌಕರರ ಎರಡು ತಿಂಗಳ ಸಂಬಳಕ್ಕಿಂತ ಹೆಚ್ಚಿರಬಾರದು ಎಂದು ಪರಿಷ್ಕರಿಸಲು ಮನವಿ ಮಾಡಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಮತ್ತು ಆಸ್ತಿ ಖರೀದಿಗೆ ಅನುಮತಿ ಕಡ್ಡಾಯ ವಿಚಾರವಾಗಿಯೂ ಕ್ರಮಕೈಗೊಳ್ಳಲು ಕೋರಲಾಗಿದೆ.