alex Certify BIG NEWS: ದೇಶದಲ್ಲಿದೆ ಇನ್ನೂ 4,89,294 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ ಇನ್ನೂ 4,89,294 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು…?

ನವದೆಹಲಿ: ದೇಶದಲ್ಲಿ ಕೊರೊನಾ ಮಾಹಾಮಾರಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 47,905 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 86,83,917ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 550 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,28,121ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,89,294 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 80,66,502 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 52,718 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 11,93,358 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 12,19,62,509 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...