alex Certify ದನಗಳ್ಳರ ಮೇಲೆ ಪೊಲೀಸರ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದನಗಳ್ಳರ ಮೇಲೆ ಪೊಲೀಸರ ಗುಂಡಿನ ದಾಳಿ

Gun shooter arrested by police at Jorpati | First nepali infotainment web - Facemeu.com

ಚಿಕ್ಕಮಗಳೂರು: ಕರುಗಳನ್ನು ಕದ್ದು ಪರಾರಿಯಾಗುತ್ತಿದ್ದ ವೇಳೆ ದನಗಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

ಆರೋಪಿಗಳು ಕರುಗಳನ್ನು ಕದ್ದು ವಾಹನದಲ್ಲಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲಿಂಗದಹಳ್ಳಿ ಠಾಣೆ ಪೊಲೀಸರು, ವಾಹನ ಅಡ್ಡಗಟ್ಟಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ವಾಹನ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಪಿಎಸ್ಐ ರಫೀಕ್ ಆರೋಪಿಗಳ ಮೇಲೆ 5 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಇಬ್ಬರು ಕಾನ್ಸ್ ಟೇಬಲ್ ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಆರೋಪಿಗಳು ಪರಾರಿಯಾಗಿದ್ದು, ಶೋಧ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...