alex Certify ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್: ನಟ ವಿನೋದ್ ರಾಜ್ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್: ನಟ ವಿನೋದ್ ರಾಜ್ ದೂರು

ಬೆಂಗಳೂರು: ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿನೋದ್ ರಾಜ್ ಅವರು ಈ ಕುರಿತಾಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದು ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ ಪ್ರಕಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...