alex Certify ಕಟ್ಟಡ ಕಾರ್ಯಾಚರಣೆ ವೇಳೆ ದುರಂತ: ಅಗ್ನಿಶಾಮಕ ದಳ ಸಿಬ್ಬಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ಕಾರ್ಯಾಚರಣೆ ವೇಳೆ ದುರಂತ: ಅಗ್ನಿಶಾಮಕ ದಳ ಸಿಬ್ಬಂದಿ ಸಾವು

ಕುಸಿದಿದ್ದ ಕಟ್ಟಡ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.

ರಕ್ಷಣಾ ಸಿಬ್ಬಂದಿ ನಿಧನಕ್ಕೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ, ಕೆ. ಶಿವರಾಜನ್​ ಹಾಗೂ ಪಿ. ಕೃಷ್ಣಮೂರ್ತಿ ಕುಟುಂಬಕ್ಕೆ 25ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ತಮಿಳುನಾಡು ಪೊಲೀಸರು ಶಾರ್ಟ್ ಸರ್ಕ್ಯೂಟ್​ನಿಂದಾಗಿ ಹಳೆಯ ಕಟ್ಟಡದಲ್ಲಿ ಬೆಂಕಿ ತಗುಲಿದ್ದು ಮಾತ್ರವಲ್ಲ ಕಟ್ಟಡ ಕುಸಿದು ಬಿದ್ದಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಅಂತಾ ಹೇಳಿದ್ದಾರೆ.

ದುರಂತದಲ್ಲಿ ಕೆಲ ಸಿಬ್ಬಂದಿಗೆ ಗಾಯಗಳಾಗಿವೆ ಅಂತಾ ಖಾಸಗಿ ಮಾಧ್ಯಮ ವರದಿ ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಸಂತಾಪ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಮೃತರ ಕುಟುಂಬಕ್ಕೆ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಅಂತಾ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...