ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಡಿಪ್ಲೋಮಾ ಕಲಿತವರಿಗೆ ಉದ್ಯೋಗ ಮಾಹಿತಿ ಒದಗಿಸಲು ಯೋಜನೆ ರೂಪಿಸಲಾಗಿದೆ.
ಕಾರ್ಯಪಡೆ ರಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸಿಕೊಡಲಾಗುತ್ತದೆ. ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಓದಿ ಪಾಸಾದವರಿಗೆ ಉದ್ಯೋಗ ಕಲ್ಪಿಸಲು ಮತ್ತು ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ. 2017 ರಿಂದ 20 ರ ವರೆಗಿನ ಅವಧಿಯಲ್ಲಿ ಓದು ಮುಗಿಸಿ ಕೆಲಸ ಹುಡುಕುತ್ತಿರುವವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ವಿದ್ಯಾರ್ಥಿಗಳು ಪಾಸಾಗಿ ಮೂರ್ನಾಲ್ಕು ವರ್ಷ ಕಳೆದ ನಂತರವೂ ಕಾಲೇಜಿನಿಂದ ಉದ್ಯೋಗವಕಾಶಗಳ ಮಾಹಿತಿ ನೀಡಲಾಗುವುದು. ಇದಕ್ಕಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕಾರ್ಯಪಡೆ ರಚಿಸಲಾಗಿದೆ.
ಕಾರ್ಪೋರೇಟ್ ಸಂಸ್ಥೆಗಳಲ್ಲಿ ವಿವಿಧ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗಾವಕಾಶಗಳು ಇರುತ್ತವೆ. ಅವುಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸಲಾಗುತ್ತದೆ. ಅಲ್ಲದೇ, ಅವರನ್ನು ಸಂದರ್ಶನಕ್ಕೆ ಸಿದ್ಧಪಡಿಸಲಾಗುತ್ತದೆ. ಇದಕ್ಕಾಗಿ ಮಾರ್ಗದರ್ಶಕರನ್ನು ನೇಮಿಸಲಾಗುತ್ತದೆ ಎಂದು ಹೇಳಲಾಗಿದೆ.