ನವದೆಹಲಿ: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ವಿರುದ್ಧ ಹಿರಿಯ ನಾಯಕ ಕಪಿಲ್ ಸಿಬಲ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಜನರಿಗೆ ಕಾಂಗ್ರೆಸ್ ಈಗ ನಗಣ್ಯವಾಗಿ ಕಾಣುತ್ತಿದೆ. ಬಿಜೆಪಿಗೆ ಕಾಂಗ್ರೆಸ್ ಪರ್ಯಾಯವೆಂದು ಜನರಿಗೆ ಅನಿಸುತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಲು ಪ್ರಜಾಪ್ರಭುತ್ವದ ಮಾರ್ಗವನ್ನು ಒಪ್ಪಬೇಕು. ಕಾಂಗ್ರೆಸ್ ಕಾರ್ಯಕಾರಣಿ ಹೈಕಮಾಂಡ್ ನಿಂದ ನಾಮನಿರ್ದೇಶಿತವಾಗಿದೆ. ನಾವು ಈಗ ಎಚ್ಚೆತ್ತುಕೊಳ್ಳದೆ ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಬಿಹಾರ ಚುನಾವಣೆಗೆ ಮೊದಲೇ ನಾವು ಪತ್ರ ಬರೆದು ಹೇಳಿದ್ದೆವು. ಆದರೂ ಕ್ರಮಕೈಗೊಳ್ಳದ ಹೈಕಮಾಂಡ್ ಕಣ್ಮುಚ್ಚಿ ಕುಳಿತಿತ್ತು. ಇದರ ಪರಿಣಾಮ ಬಿಹಾರ ಫಲಿತಾಂಶದಲ್ಲಿ ಪ್ರತಿಫಲಿತವಾಗಿದೆ ಎಂದು ದೂರಿದ್ದಾರೆ.