ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುರುಗಾನಂದಂ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಗೆಳೆಯರೊಂದಿಗೆ ಮಧುರೈನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರ್ ನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಮುರುಗಾನಂದಂ ಮೇಲೆ ದಾಳಿ ಮಾಡಿ ತಲೆ ಕತ್ತರಿಸಿ ಹತ್ಯೆಮಾಡಿದ್ದಾರೆ. ತಲೆಯನ್ನು ಸಮೀಪದ ಚರ್ಚ್ ಬಳಿ ಎಸೆದಿದ್ದಾರೆ.
ಘಟನೆಯ ದೃಶ್ಯವನ್ನು ದಾರಿಹೋಕರೊಬ್ಬರು ಕ್ಯಾಮೆರಾಲ್ಲಿ ಸೆರೆಹಿಡಿದಿದ್ದಾರೆ. ಭೀಕರ ಹತ್ಯೆಯನ್ನು ಕಂಡ ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ಮುರುಗಾನಂದಂ ಜೊತೆಗಿದ್ದ ಸ್ನೇಹಿತರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದು, ಕೃತ್ಯಕ್ಕೆ ಬಳಕೆಯಾಗಿದ್ದ ಕಾರ್ ವಶಕ್ಕೆ ಪಡೆಯಲಾಗಿದೆ.