ಢಾಕಾ: ಬಾಂಗ್ಲಾದೇಶದ 19 ವರ್ಷದೊಳಗಿನ ಕ್ರಿಕೆಟ್ ತಂಡದ ಮಾಜಿ ಆಟಗಾರ ಮೊಹಮ್ಮದ್ ಶಾಜಿಬ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದುರ್ಗಾಪುರದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದುರ್ಗಾಪುರ ಪೊಲೀಸ್ ಠಾಣೆ ಉಸ್ತುವಾರಿ ಹಶ್ಮೋತ್ ಅಲಿ ತಿಳಿಸಿದ್ದಾರೆ. ಟಿ -20 ಪಂದ್ಯಾವಳಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾದ ನಂತರ ಅವರು ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ.
2017 ರಲ್ಲಿ ಅಂಡರ್ 19 ಏಷ್ಯಾಕಪ್ ನಲ್ಲಿ ಬಾಂಗ್ಲಾದೇಶ ತಂಡವನ್ನು ಅವರು ಪ್ರತಿನಿಧಿಸಿದ್ದರು. 2018 ರಲ್ಲಿ ಅಂಡರ್ 19 ವಿಶ್ವಕಪ್ ನಲ್ಲಿ ಸ್ಟ್ಯಾಂಡ್ ಬೈ ಆಟಗಾರರಾಗಿದ್ದರು.