ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಲಾದರೂ ನಮ್ಮ ಪರ ನಿಲ್ಲಲಿ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಪರವಾಗಿ ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಅವರು ಇದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈಗಲಾದರೂ ನಮ್ಮ ಪರ ನಿಲ್ಲಲಿ ಎಂದು ಅವರು ಹೇಳಿದ್ದಾರೆ.
ಸಂಪತ್ ರಾಜ್ ತಪ್ಪು ಮಾಡಿಲ್ಲವೆಂದರೆ ಏಕೆ ತಲೆಮರೆಸಿಕೊಳ್ಳಬೇಕಿತ್ತು ಎಂದು ಪ್ರಶ್ನಿಸಿದ ಅವರು, ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯಕ್ಕೆ ಧನ್ಯವಾದ ಹೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತಿದ್ದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿ. ನಮ್ಮ ಪರವಾಗಿ ನಿಲ್ಲಲಿ. ನ್ಯಾಯದೊರಕಿಸಿ ಕೊಡಲಿ ಎಂದು ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.