alex Certify GOOD NEWS: ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 29,164 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,74,291ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 449 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,30,519ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,53,401 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 82,90,371 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 40,791 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ನಿನ್ನೆಯೊಂದೇ ದಿನದಲ್ಲಿ 8,44,382 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 12,65,42,907 ಜನರಲ್ಲಿ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...