ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ ಕಾರು ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕಾರು ಚಾಲಕ ಆಶೀಶ್ ಸುರೇಶ್ ನಾಯಕ್ ಬಂಧಿತ ಆರೋಪಿ. ಸಿಎಂ ಪ್ರಮೋದ್ ಸಾವಂತ್ ಅವರಿಗೆ ಮೊಬೈಲ್ ನಲ್ಲಿ ಸಂದೇಶ ರವಾನಿಸಿದ್ದ ಆರೋಪಿ ಕೊಲೆ ಬೆದರಿಕೆ ಹಾಕಿದ್ದ ಅಲ್ಲದೇ 20 – 50 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ಪಣಜಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಆರೋಪಿ ಕಾರು ಚಾಲಕನನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.