ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಎರಡು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕರ ಮನೆಗೆ ಬೆಂಕಿ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಪತ್ ರಾಜ್ ಅವರನ್ನು ನಿನ್ನೆ ರಾತ್ರಿ ಸ್ನೇಹಿತನ ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಇಂದು ಅವರನ್ನು ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ನ್ಯಾಯಾಲಯ ನ.19ರವರೆಗೆ ಸಂಪತ್ ರಾಜ್ ಅವರನ್ನು ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.
ಗಲಭೆ ಪ್ರಕರಣದ ಆರೋಪದಲ್ಲಿ ತನ್ನ ಹೆಸರು ಕೇಳಿಬರುತಿದ್ದಂತೆಯೇ ಕೊರೊನಾ ಸೋಂಕು ತಗುಲಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್, ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಎಸ್ಕೇಪ್ ಆಗಿ ತಲೆಮರೆಸಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹಿತನ ಮನೆಗೆ ಬಂದಿದ್ದ ಸಂಪತ್ ರಾಜ್ ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು.