ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಗ್ಯಾಂಗ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ನಿಂದ ಸ್ಪಷ್ಟನೆ ನೀಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ಮರು ಸ್ಥಾಪಿಸಲು ಒತ್ತಾಯಿಸಿ ಜಮ್ಮು ಮತ್ತು ಕಾಶ್ಮೀರದ ಪಕ್ಷಗಳು ಗುಪ್ಕರ್ ಮೈತ್ರಿಕೂಟ ರಚಿಸಿಕೊಂಡಿದ್ದು, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ಪಕ್ಷ ಗುಪ್ಕರ್ ಮೈತ್ರಿಕೂಟದಲ್ಲಿ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಕಾಶ್ಮೀರದ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಕಾಶ್ಮೀರದ ವಿಶೇಷ ಸ್ಥಾನ ರದ್ದು ಮಾಡಿರುವುದರ ವಿರುದ್ಧ ಹೋರಾಟ ನಡೆಸಲು ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಪಕ್ಷ ಈ ಮೈತ್ರಿಯ ಭಾಗವಾಗಿ ಇಲ್ಲವೆಂದು ರಂದೀಪ್ ಸುರ್ಜೆವಾಲಾ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅಮಿತ್ ಶಾ ಅವರು ಗುರ್ ಗ್ಯಾಂಗ್ ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ಭಯೋತ್ಪಾದನೆಯ ಯುಗಕ್ಕೆ ಕೊಂಡೊಯ್ಯಲು ಯತ್ನ ನಡೆಸಿಗಿದೆ ಎಂದು ಆರೋಪಿಸಿದ್ದರು.