ಬೆಂಗಳೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 20 ರಿಂದ ಪಿಯುಸಿ ಉಪನ್ಯಾಸಕರ ನೇಮಕಾತಿ ಆದೇಶ ನೀಡಲಾಗುವುದು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ನೂತನ ಉಪನ್ಯಾಸಕರುಗಳಿಗೆ ನವಂಬರ್ 20 ರಿಂದ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾಲೇಜು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದೆ. ಅದಕ್ಕಿಂತ ಮೊದಲು ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರವನ್ನು ಆಯಾ ಜಿಲ್ಲೆಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.
ನವೆಂಬರ್ 23 ರಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು ಅಂದಿನಿಂದಲೇ ಅರ್ಜಿ ಸಲ್ಲಿಸಬಹುದು. ಈ ಬಾರಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.