ಮುಂಬೈ: ರಾಜ್ಯದಲ್ಲಿ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಬಾಲ ಬಿಚ್ಚಿದ್ದು, ಕರ್ನಾಟಕದ ಹಲವು ಭಾಗಗಳು ತನ್ನದೆಂದು ಹೇಳುವ ಮೂಲಕ ಮಹಾ ಡಿಸಿಎಂ ಅಜಿತ್ ಪವಾರ್ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು. ಅಖಂಡ ಮಹಾರಾಷ್ಟ್ರ ಬಾಳಾ ಠಾಕ್ರೆ ಅವರ ಕನಸಾಗಿತ್ತು. ಹಾಗಾಗಿ ಅಖಂಡ ಮಹಾರಾಷ್ಟ್ರ ನಮ್ಮ ಗುರಿ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹೊಸ ಕ್ಯಾತೆ ಆರಂಭಿಸಿದ್ದಾರೆ.
ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ರಚಿಸಿರುವುದಕ್ಕೆ ಈಗಾಗಲೇ ಕರ್ನಾಟಕದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಈ ನಡುವೆ ಕರ್ನಾಟಕದ ಭಾಗಗಳನ್ನು ತಮ್ಮದೆಂದು ಹೇಳುವ ಮೂಲಕ ಮಹಾ ಡಿಸಿಎಂ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.