ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.
ಸಂಪತ್ ರಾಜ್ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದರು ಇದಕ್ಕೆ ಅವರಿಗೆ ಹಲವರು ಸಹಾಯ ಮಾಡಿದ್ದರು. ಈ ಎಲ್ಲಾ ಘಟನೆಗಳಿಗೆ ಸೋಶಿಯಲ್ ಮೀಡಿಯಾ ಕಾರಣ. ಈ ನಿಟ್ಟಿನಲ್ಲಿ ತನಿಖೆ ನಡೆಸಬೇಕಿದೆ. ಪ್ರಕರಣದ ಇನ್ನೂ ಅನೇಕ ಆರೋಪಿಗಳು ತಲೆಮರೆಸಿಕೊಂದಿದ್ದಾರೆ. ಹೀಗಾಗಿ ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಸಿಸಿಬಿ ಅಧಿಕಾರಿಗಳು 67ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ವಾದ ಆಲಿಸಿದ ನ್ಯಾಯಾಲಯ ನಾಳೆ ಮಧ್ಯಾಹ್ನ 1:30ರ ವರೆಗೂ ಸಂಪತ್ ರಾಜ್ ಅವರನ್ನು ಸಿಸಿಬಿ ಕಸ್ಟಡಿ ವಹಿಸಿ ಆದೇಶ ನೀಡಿದೆ.