ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ. ಸರ್ಕಾರದಿಂದ ಇತ್ತೀಚೆಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಇತ್ತೀಚೆಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಶಾಕ್ ಆಗಿದೆ ಎನ್ನಲಾಗಿದೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿಯನ್ನು ರದ್ದು ಮಾಡಿದ್ದು, ಹೊಸ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ಆದೇಶಿಸಿದೆ. 4 ವಾರದಲ್ಲಿ ಮೀಸಲಾತಿ ನಿಗದಿ ಮಾಡುವಂತೆ ಸೂಚಿಸಿದೆ. ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ ಎಂದು ಹೇಳಲಾಗಿದೆ.