alex Certify ಗುಡ್ ನ್ಯೂಸ್: 9 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ, ಸಚಿವ ಪ್ರಭು ಚವ್ಹಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: 9 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ, ಸಚಿವ ಪ್ರಭು ಚವ್ಹಾಣ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ 29.60 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆಯನ್ನು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶು ಸಂಗೋಪನಾ ಇಲಾಖೆಯಲ್ಲಿ 18,000 ಹುದ್ದೆಗಳಲ್ಲಿ 9000 ಹುದ್ದೆಗಳು ಖಾಲಿ ಉಳಿದಿವೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಶು ಇಲಾಖೆಗೆ ಅಗತ್ಯವಿರುವ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗಿದೆ. 9 ಸಾವಿರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಬೇರೆ ಇಲಾಖೆಗಳಲ್ಲಿ ನಿಯೋಜನೆಯಾಗಿರುವ ಪಶುವೈದ್ಯರನ್ನು ಮಾತೃ ಇಲಾಖೆಗೆ ಕರೆಸಿಕೊಳ್ಳಲು ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...