ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ಬಳಿ ಹೇಮಾವತಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೇಮಾವತಿ ಕಾಲುವೆ ಸುರಂಗದ ಸಮೀಪ ಬೈಕ್ ನಿಲ್ಲಿಸಿದ್ದ ಪ್ರೇಮಿಗಳು ನಾಪತ್ತೆಯಾಗಿದ್ದು, ಅವರ ಮೃತದೇಹಗಳು ಒಟ್ಟಿಗೆ ಪತ್ತೆಯಾಗಿವೆ. ನವೆಂಬರ್ 16 ರಂದು ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಪ್ರೇಮಿಗಳು ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿದ್ದಾರೆ.
18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ಪ್ರೀತಿಸಿದ್ದು, ಅವರ ಮದುವೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಹಿರಿಸಾವೆ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು ತುಮಕೂರು ಜಿಲ್ಲೆಯಲ್ಲಿ ನಾಲೆಯಲ್ಲಿ ಮೃತದೇಹ ಕಂಡು ಬಂದಿವೆ. ಯುವಕ, ಯುವತಿಯ ಸಾವಿನ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.