ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿ ತೊರೆದು ಗೋವಾಗೆ ಶಿಫ್ಟ್ ಆಗಿದ್ದಾರೆ.
ಸೋನಿಯಾ ಗಾಂಧಿ ಹಲವು ದಿನಗಳಿಂದ ಎದೆ ನೋವಿನಿಂದ ಬಳಲುತ್ತಿದ್ದು, ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ವೈದ್ಯರು ದೆಹಲಿ ತೊರೆಯುಂತೆ ಸಲಹೆ ನೀಡಿದ್ದಾರೆ. ವಾಯು ಮಾಲಿನ್ಯದಿಂದ ಶ್ವಾಸಕೋಶದ ಮೇಲೆ ಇನ್ನಷ್ಟು ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಕೆಲ ದಿನಗಳ ಕಾಲ ದೆಹಲಿಯಿಂದ ಹೊರಗಿರುವಂತೆ ಸೋನಿಯಾ ಗಾಂಧಿ ಅವರಿಗೆ ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೀಗ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಗೆ ಶಿಫ್ಟ್ ಆಗಿದ್ದಾರೆ.