alex Certify BIG NEWS: ದೇಶದಲ್ಲಿ ಕೋವಿಡ್ ನಿಂದ ಗುಣಮುಖರಾದವರೆಷ್ಟು….? ಸಕ್ರಿಯ ಪ್ರಕರಣಗಳೆಷ್ಟು….?: ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಕೋವಿಡ್ ನಿಂದ ಗುಣಮುಖರಾದವರೆಷ್ಟು….? ಸಕ್ರಿಯ ಪ್ರಕರಣಗಳೆಷ್ಟು….?: ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 45,209 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 90,95,807ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 501 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,33,227ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,40,962 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 85,21,617 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 43,493 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ನಿನ್ನೆಯೊಂದೇ ದಿನದಲ್ಲಿ 10,75,326 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 13,17,33,134 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...