alex Certify ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಈ ವರ್ಷ 1ರಿಂದ 8ನೇ ತರಗತಿವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಬೋರ್ಡ್ ಎಕ್ಸಾಂ ಇರುವುದರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಡಿಸೆಂಬರ್ ಅಂತ್ಯದವರೆಗೂ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ತೆರೆಯುವುದಿಲ್ಲ. ಡಿಸೆಂಬರ್ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಾಗುವುದು. ಈ ವರ್ಷ 1-8ನೇ ತರಗತಿವರೆಗೆ ಶಾಲೆ ತೆರೆಯುವ ಬಗ್ಗೆ ಯೋಚನೆಯೇ ಇಲ್ಲ. ಹಾಗಂತ ಝಿರೋ ಇಯರ್ ಎಂದು ಪರಿಗಣಿಸಲಾಗಲ್ಲ, ಬೇರೆ ಬೇರೆ ವಿಧಗಳಲ್ಲಿ ತರಗತಿಗಳು ನಡೆಯುತ್ತದೆ ಎಂದರು.

ಇನ್ನು ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಬೋರ್ಡ್ ಪರೀಕ್ಷೆ ಇರುವುದರಿಂದ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. 10ನೇ ತರಗತಿಯಲ್ಲಿ 9,59,566 ಮಕ್ಕಳು ಪರೀಕ್ಷೆ ಬರೆಯುವವರಿದ್ದಾರೆ.ಇನ್ನು ದ್ವಿತೀಯ ಪಿಯುಸಿಯಲ್ಲಿ 5,70,126 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಮಕ್ಕಳಿಗೆ ಪ್ರೇರಣೆ, ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಖಾಸಗಿ ಶಾಲೆಯವರು ಎರಡನೇ ಅವಧಿಯ ಶುಲ್ಕ ಪಡೆಯುವ ಬಗ್ಗೆ ಬೇಡಿಕೆ ಬಂದಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...