ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಇತ್ತೀಚೆಗೆ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನಿಗಮಕ್ಕೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆರಂಭಿಕ ಹಂತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಹೊಣೆ ನೀಡಲಾಗಿದೆ.
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ವಿವಾದಕ್ಕೀಡಾಗಿದ್ದ ರಾಜ್ಯ ಸರ್ಕಾರ ಅದರ ಬೆನ್ನಲ್ಲೇ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿತ್ತು. ಭಾಷೆ, ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ನಡುವೆಯೇ ಇದೀಗ ನಿಗಮಕ್ಕೆ ಹಣ ಮೀಸಲಿಟ್ಟು ಆದೇಶ ಹೊರಡಿಸಿದೆ.