ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಹಾಗೂ ಕೃಷಿ ಸಂಬಂಧಿತ ಕಾಯಿದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 26 ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ.
ಅಂಚೆ ಇಲಾಖೆ ನೌಕರರು, ಬಿಸಿಯೂಟ ನೌಕರರು, ಕಟ್ಟಡ, ಹಮಾಲಿ ಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆಟೋಚಾಲಕರು, ಬ್ಯಾಂಕ್, ವಿಮೆ, ದೂರಸಂಪರ್ಕ ಇಲಾಖೆ ನೌಕರರು ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರು ಮುಷ್ಕರ ಕೈಗೊಳ್ಳಲಿದ್ದಾರೆ.
ಕಾರ್ಮಿಕ ಸಂಹಿತೆಗಳ ವಾಪಸಾತಿ, ರೈತ ವಿರೋಧಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಕೃಷಿ ಸಂಬಂಧಿತ ಕಾನೂನು ತಿದ್ದುಪಡಿ ಕೈಬಿಡಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕೆಂದು ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿದೆ.