ಮೈಸೂರು: ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಕೊರೋನಾ ಕಾರಣದಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲಸ ಸಿಗದೆ ಅನೇಕ ಯುವಕ-ಯುವತಿಯರು ಇದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
2021 ರ ಜೂನ್ ಒಳಗೆ ರಾಜ್ಯದಲ್ಲಿನ ಸಹಕಾರ ಸಂಘಗಳಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಹಾಲು ಒಕ್ಕೂಟಗಳಲ್ಲಿ 1400 ಹುದ್ದೆಗಳನ್ನು ಕೂಡ ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.