ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ನಿವಾರ್ ಚಂಡಮಾರುತದ ಕಾರಣ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ಭಾರೀ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ ಎನ್ನಲಾಗಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.