alex Certify ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ

ಧಾರವಾಡ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುವುದು.

2020-21 ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3 ಬಿ ಗೆ ಸೇರಿದ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ಧಾರವಾಡ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಡಿಸೆಂಬರ್ 19 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...